Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:17 - ಕನ್ನಡ ಸತ್ಯವೇದವು J.V. (BSI)

17 ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ಸಿವಾಸನಾಚ್ಯಾ ಮದ್ದಿ ಬಸಲ್ಲೆ ಬೊಕ್ಡು ತೆಂಚೊ ಕುರ್ಬುರ್ ಹೊತಾ, ಅನಿ ತೆಂಕಾ ಜಿವ್ ದಿತಲೆ ಪಾನಿ ಅಸಲ್ಲ್ಯಾ ಝರ್‍ಯಾನಿಕ್ಡೆ ಘೆವ್ನ್ ಜಾತಾ. ಅನಿ ದೆವ್ ತೆಂಚ್ಯಾ ಡೊಳ್ಯಾನಿತ್ಲಿ ಹರಿ ಎಕ್ ದುಕ್ಕಾ ಪುಸುನ್ ಕಾಡ್ತಾ”. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:17
42 ತಿಳಿವುಗಳ ಹೋಲಿಕೆ  

ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


[ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು.


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು