Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:15 - ಕನ್ನಡ ಸತ್ಯವೇದವು J.V. (BSI)

15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವದಕ್ಕಾಗಿ ಅದೇ ವರುಷ ಅದೇ ತಿಂಗಳು ದಿನ ತಾಸಿಗೆ ಸಿದ್ಧವಾಗಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:15
9 ತಿಳಿವುಗಳ ಹೋಲಿಕೆ  

ಅವುಗಳ ಬಾಯಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರನೆಯ ಭಾಗವು ಹತವಾಯಿತು.


ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.


ಸಮುದ್ರಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.


ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.


ಇವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಪೀಡಿಸುವದಕ್ಕೆ ಅಪ್ಪಣೆಯಾಯಿತು. ಅವರಿಗುಂಟಾದ ಪೀಡೆಯು ಚೇಳು ಮನುಷ್ಯನನ್ನು ಹೊಡೆಯುವದರಿಂದುಂಟಾಗುವ ಪೀಡೆಗೆ ಸಮಾನವಾಗಿತ್ತು.


ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;


ಮೂರನೆಯ ದೇವದೂತನು ತುತೂರಿಯನ್ನೂದಿದಾಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.


ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು