Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:4 - ಕನ್ನಡ ಸತ್ಯವೇದವು J.V. (BSI)

4 ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಂಕಾ ಗವಾತ್ ಹೊಂವ್ದಿ, ಬಾರಿಕ್-ಬಾರಿಕ್ ಝಾಡಾ ಹೊಂವ್ದಿ, ಮೊಟಿ ಝಾಡಾ ಹೊಂವ್ದಿ ಹಾಳ್ ಕರಿನಸ್ತಾನಾ, ಕೊನಾಚ್ಯಾ ಕಪಾಳಾ ವರ್ತಿ ದೆವಾಚ್ಯಾ ಛಪ್ಪ್ಯಾಚಿ ವಳಕ್ ನಾ ತ್ಯಾ ಲೊಕಾಕ್ನಿ ತರಾಸ್ ಕರುಚೆ ಮನುನ್ ಸಾಂಗಟಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:4
15 ತಿಳಿವುಗಳ ಹೋಲಿಕೆ  

ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು