Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:6 - ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಪಾಚ್ ಮ್ಹಯಿನ್ಯಾತ್ನಿ ತೆನಿ ಮರಾನ್ ಮಾಗ್ತ್ಯಾತ್, ಖರೆ ತೆ ತೆಂಕಾ ಯೆಯ್ನಾ; ತೆನಿ ಮರಾನ್ ಯೆಲ್ಯಾರ್ ಫಿರೆ ಮನ್‍ತ್ಯಾತ್, ಖರೆ ಮರಾನ್ ತೆಂಚೆಕ್ನಾ ಧುರ್ ಪಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:6
9 ತಿಳಿವುಗಳ ಹೋಲಿಕೆ  

ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ಆ ಕಾಲದಲ್ಲಿ ಜನರು - ಬೆಟ್ಟಗಳೇ, ನಮ್ಮ ಮೇಲೆ ಬೀಳಿರಿ; ಗುಡ್ಡಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು.


ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು