Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:10 - ಕನ್ನಡ ಸತ್ಯವೇದವು J.V. (BSI)

10 ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:10
22 ತಿಳಿವುಗಳ ಹೋಲಿಕೆ  

ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು;


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿವಿುತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.


ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಮತ್ತು ಯೆರೂಸಲೇವಿುನ ಸಮಸ್ತ ಪ್ರಧಾನರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ;


ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು