ಪ್ರಲಾಪಗಳು 1:11 - ಕನ್ನಡ ಸತ್ಯವೇದವು J.V. (BSI)11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.” ಅಧ್ಯಾಯವನ್ನು ನೋಡಿ |