Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:15 - ಕನ್ನಡ ಸತ್ಯವೇದವು J.V. (BSI)

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:15
27 ತಿಳಿವುಗಳ ಹೋಲಿಕೆ  

ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವದು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.


ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು,


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ; ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಇವರು ಆ ವರುಷದಿಂದ ಹದಿನೆಂಟು ವರುಷಗಳವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲ್ಯರನ್ನು ಬಹಳವಾಗಿ ಪೀಡಿಸುತ್ತಾ ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


ಆದಕಾರಣ ಬೈಲುಗಾಳಿಯು ಬಡಿದುಕೊಂಡು ಹೋಗುವ ಒಣಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


[ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು