ಪ್ರಲಾಪಗಳು 1:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ. ಅಧ್ಯಾಯವನ್ನು ನೋಡಿ |