ಪ್ರಲಾಪಗಳು 1:20 - ಕನ್ನಡ ಸತ್ಯವೇದವು J.V. (BSI)20 ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ಮಗಚಿಕೊಂಡಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ. ಅಧ್ಯಾಯವನ್ನು ನೋಡಿ |