ಪ್ರಲಾಪಗಳು 1:7 - ಕನ್ನಡ ಸತ್ಯವೇದವು J.V. (BSI)7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿ |