ಪ್ರಲಾಪಗಳು 1:8 - ಕನ್ನಡ ಸತ್ಯವೇದವು J.V. (BSI)8 ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.