Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:9 - ಕನ್ನಡ ಸತ್ಯವೇದವು J.V. (BSI)

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:9
46 ತಿಳಿವುಗಳ ಹೋಲಿಕೆ  

ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ನಾನು ಕುಗ್ಗಿರುವದನ್ನೂ ಕಷ್ಟಪಡುವದನ್ನೂ ನೋಡಿ ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.


ಆ ಪ್ರಾಂತಗಳವರು ಸೇನಾಧೀಶ್ವರ ಯೆಹೋವನ ಜನರನ್ನು ದೂಷಿಸಿ ಅವರ ಮೇಲೆ ಉಬ್ಬಿಕೊಂಡು ಬಂದದರಿಂದ ಅವರ ಹೆಮ್ಮೆಯ ನಿವಿುತ್ತವೇ ಅವರಿಗೆ ಈ ಗತಿಯಾಗುವದು.


ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು; ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವದಕ್ಕಾಗಿ ಯಾರೂ ಕಜ್ಜಾಯವನ್ನು ಮುರಿದುಕೊಡರು; ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾಯಕ ಪಾನಪಾತ್ರೆಯನ್ನು ನೀಡರು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ನಾವು ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ಕೇಳಿ ನಮ್ಮ ದುರವಸ್ಥೆಯನ್ನೂ ಕಷ್ಟವನ್ನೂ ಉಪದ್ರವವನ್ನೂ ನೋಡಿ


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.


ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?


ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು