Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:1 - ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:1
28 ತಿಳಿವುಗಳ ಹೋಲಿಕೆ  

ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಆತನು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ.


ಇಸ್ರಾಯೇಲ್ಯರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣುಪಾಲಾಗಿ ಹೋಯಿತು. ಅಯ್ಯೋ, ಪರಾಕ್ರಮಶಾಲಿಗಳೇ, ಹೇಗೆ ಹತರಾದಿರಿ!


ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.


ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು.


ಅವನ ಯೌವನವನ್ನು ಬೇಗ ಮುಗಿಸಿ ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದೀ. ಸೆಲಾ.


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು