ಪ್ರಲಾಪಗಳು 2:11 - ಕನ್ನಡ ಸತ್ಯವೇದವು J.V. (BSI)11 ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ. ಅಧ್ಯಾಯವನ್ನು ನೋಡಿ |