ಪ್ರಲಾಪಗಳು 2:12 - ಕನ್ನಡ ಸತ್ಯವೇದವು J.V. (BSI)12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು ಅಸುರುಸುರಾಗಿ ಅಮ್ಮಾ ತಿನ್ನಲಿಕ್ಕೆ ಇಲ್ಲವೋ, ಕುಡಿಯಲಿಕ್ಕೆ ಇಲ್ಲವೋ ಎಂದು ಗೋಳಿಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಮಕ್ಕಳು ತಮ್ಮ ತಾಯಂದಿರನ್ನು, “ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣಬಿಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ. ಅಧ್ಯಾಯವನ್ನು ನೋಡಿ |