ಪ್ರಲಾಪಗಳು 2:14 - ಕನ್ನಡ ಸತ್ಯವೇದವು J.V. (BSI)14 ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ. ಅಧ್ಯಾಯವನ್ನು ನೋಡಿ |