Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:2 - ಕನ್ನಡ ಸತ್ಯವೇದವು J.V. (BSI)

2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:2
32 ತಿಳಿವುಗಳ ಹೋಲಿಕೆ  

ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಹತಿಸಿದ್ದೀ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.


ದುರ್ಗಮವಾಗಿಯೂ ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ ತಗ್ಗಿಸಿ ನೆಲಸಮಮಾಡಿ ದೂಳಿಗೇ ತರುವನು.


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೇಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ ಸಿಟ್ಟುಮಾಡಿ


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು