Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:4 - ಕನ್ನಡ ಸತ್ಯವೇದವು J.V. (BSI)

4 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:4
38 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟಸುಂದರಾಲಯವನ್ನೂ ಹೃದಯೋಲ್ಲಾಸವಾದ ಅವರ ಗಂಡುಹೆಣ್ಣುಮಕ್ಕಳನ್ನೂ


ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ


ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ನಿಶ್ಚಯವಾಗಿ ಪದೇ ಪದೇ ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.


ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.


ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ; ನನ್ನ ಗುಡಾರವನ್ನು ಹಾಕುವದಕ್ಕೂ ನನ್ನ ಪರದೆಗಳನ್ನು ಬಿಗಿಯುವದಕ್ಕೂ ಇನ್ನು ಯಾರೂ ಇರುವದಿಲ್ಲ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ?


ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.


ಆತನು ಅದಕ್ಕೆ ಮರಣಕರವಾದ ಅಗ್ನಿ ಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವದಕ್ಕೆ ಗುರಿಯಿಟ್ಟು ನಿಂತಿದ್ದಾನೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.


ಆತನು ಮೇಲಣಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳಲ್ಲಿ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು