Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:7 - ಕನ್ನಡ ಸತ್ಯವೇದವು J.V. (BSI)

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:7
31 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


[ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.


ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.


ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು