Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:19 - ಕನ್ನಡ ಸತ್ಯವೇದವು J.V. (BSI)

19 ನಾನು ಅಲೆದು ಕಷ್ಟಪಟ್ಟದ್ದನ್ನು ಚಿತ್ತಕ್ಕೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕ ಮಾಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:19
9 ತಿಳಿವುಗಳ ಹೋಲಿಕೆ  

ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ.


ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.


ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.


ಯೆಹೋವನೇ, ದಾವೀದನ ಹಿತಕ್ಕೋಸ್ಕರ ಅವನ ಶ್ರಮಗಳನ್ನು ನೆನಪುಮಾಡಿಕೋ.


ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆಹೆಜ್ಜೆಗೂ ಅಪಮಾನ ಮಾಡುತ್ತಾರೆ.


ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ.


ಎಲೈ, ನನ್ನ ಜೀವವು ಗಾಳಿಯಂತಿದೆಯೆಂತಲೂ ನನ್ನ ಕಣ್ಣು ಇನ್ನೂ ಸುಖವನ್ನು ಕಾಣುವದಿಲ್ಲವೆಂತಲೂ ನೆನಪು ಮಾಡಿಕೋ.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು