Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:23 - ಕನ್ನಡ ಸತ್ಯವೇದವು J.V. (BSI)

23 ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ಸತ್ಯಸಂಧತೆಯು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:23
12 ತಿಳಿವುಗಳ ಹೋಲಿಕೆ  

ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವದಿಲ್ಲ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಭೂವಿು, ಆಕಾಶ, ಸಾಗರ, ಚರಾಚರ ಇವುಗಳನ್ನು ನಿರ್ಮಿಸಿದವನೂ ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು