Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:26 - ಕನ್ನಡ ಸತ್ಯವೇದವು J.V. (BSI)

26 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:26
24 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.


ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು ನಿರೀಕ್ಷಿಸುತ್ತಾ ಇದ್ದೇನೆ; ನಿನ್ನ ಆಜ್ಞೆಗಳನ್ನು ಕೈಕೊಂಡಿದ್ದೇನೆ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.


ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ


[ದೇವರೇ] ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಅದನ್ನೇ ನಿರೀಕ್ಷಿಸಿಕೊಂಡಿರುವೆನು.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಯೌವನದಲ್ಲಿ ನೊಗಹೊರುವದು ಮನುಷ್ಯನಿಗೆ ಲೇಸು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲಿದರೂ ಬೀಳೆನು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು