Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:3 - ಕನ್ನಡ ಸತ್ಯವೇದವು J.V. (BSI)

3 ನಿಶ್ಚಯವಾಗಿ ಪದೇ ಪದೇ ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:3
10 ತಿಳಿವುಗಳ ಹೋಲಿಕೆ  

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ;


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು