Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:33 - ಕನ್ನಡ ಸತ್ಯವೇದವು J.V. (BSI)

33 ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನರಮಾನವರನ್ನು ಹಿಂಸಿಸಿ ದುಃಖಪಡಿಸುವುದು ಆತನಿಗೆ ಎಷ್ಟುಮಾತ್ರಕ್ಕೂ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:33
8 ತಿಳಿವುಗಳ ಹೋಲಿಕೆ  

ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ಕಷ್ಟಾನುಭವಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಈಗಲಾದರೋ ನಿನ್ನ ನುಡಿಗಳನ್ನು ಕೈಕೊಳ್ಳುತ್ತೇನೆ.


ಕಷ್ಟಾನುಭವವು ಹಿತಕರವಾಯಿತು; ಅದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು