Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:40 - ಕನ್ನಡ ಸತ್ಯವೇದವು J.V. (BSI)

40 ನಮ್ಮ ನಡತೆಯನ್ನು ಶೋಧಿಸಿ ಪರೀಕ್ಷಿಸಿ ಯೆಹೋವನ ಕಡೆಗೆ ತಿರುಗಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:40
22 ತಿಳಿವುಗಳ ಹೋಲಿಕೆ  

ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.


ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


[ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು