Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:59 - ಕನ್ನಡ ಸತ್ಯವೇದವು J.V. (BSI)

59 ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ, ನೀವು ನನ್ನ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:59
16 ತಿಳಿವುಗಳ ಹೋಲಿಕೆ  

ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಯೆಹೋವನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ವ್ಯಾಜ್ಯವಾಡು; ನನ್ನ ಮೇಲೆ ಯುದ್ಧಮಾಡುವವರ ಸಂಗಡ ಯುದ್ಧಮಾಡು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತೀ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ರಾಹೇಲಳು - ದೇವರು ನನ್ನ ಕಡೆಗೆ ನ್ಯಾಯ ತೀರಿಸಿದ್ದಾನೆ; ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ ಎಂದು ಹೇಳಿ ಅದಕ್ಕೆ ದಾನ್ ಎಂದು ಹೆಸರಿಟ್ಟಳು.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?


ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು