Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:64 - ಕನ್ನಡ ಸತ್ಯವೇದವು J.V. (BSI)

64 ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 “ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:64
10 ತಿಳಿವುಗಳ ಹೋಲಿಕೆ  

ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ; ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರಮಾಡುವನು.


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು