Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:1 - ಕನ್ನಡ ಸತ್ಯವೇದವು J.V. (BSI)

1 ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:1
11 ತಿಳಿವುಗಳ ಹೋಲಿಕೆ  

ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ಯೇಸು - ಈ ದೊಡ್ಡ ಕಟ್ಟಣಗಳನ್ನು ನೋಡುತ್ತೀಯಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ; ಎಲ್ಲಾ ಕೆಡವಲ್ಪಡುವದು ಅಂದನು.


ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು