Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:10 - ಕನ್ನಡ ಸತ್ಯವೇದವು J.V. (BSI)

10 ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:10
12 ತಿಳಿವುಗಳ ಹೋಲಿಕೆ  

ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.


ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ ಬಹಳವಾಗಿ ಇರಕಿಸುವಾಗ ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ಇಷ್ಟ ವಿುತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಸ್ವಜನರು ನಾಶವಾದಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವದು.


ನೀವು ನಿಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ


ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು