Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:11
29 ತಿಳಿವುಗಳ ಹೋಲಿಕೆ  

ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳುಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ


ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು