Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:13 - ಕನ್ನಡ ಸತ್ಯವೇದವು J.V. (BSI)

13 ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:13
18 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು