ಪ್ರಲಾಪಗಳು 4:15 - ಕನ್ನಡ ಸತ್ಯವೇದವು J.V. (BSI)15 ಅವರನ್ನು ನೋಡುವವರು - ತೊಲಗಿರಿ, ಅಶುದ್ಧರು ನೀವು, ನಡೆಯಿರಿ, ನಡೆಯಿರಿ, ಮುಟ್ಟಬೇಡಿರಿ ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು - ಇವರು ಇನ್ನು ಇಲ್ಲಿ ತಂಗಬಾರದು ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು. ಅಧ್ಯಾಯವನ್ನು ನೋಡಿ |