ಪ್ರಲಾಪಗಳು 4:16 - ಕನ್ನಡ ಸತ್ಯವೇದವು J.V. (BSI)16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ. ಅಧ್ಯಾಯವನ್ನು ನೋಡಿ |