Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:22 - ಕನ್ನಡ ಸತ್ಯವೇದವು J.V. (BSI)

22 ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:22
17 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬೈಲುಮಾಡಿದ್ದೇನೆ, ಅವಿತುಕೊಳ್ಳಲಾರನು; ಅವನ ಸಂತಾನದವರೂ ಸಹೋದರರೂ ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಆದರೆ ನಾನು ಯಾಕೋಬನನ್ನು ಪ್ರೀತಿಸಿ ಏಸಾವನನ್ನು ದ್ವೇಷಿಸಿ ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಕಾಡುನರಿಗಳ ಪಾಲುಮಾಡಿದೆನಷ್ಟೆ; ಇದು ಯೆಹೋವನ ನುಡಿ.


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು