Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:4 - ಕನ್ನಡ ಸತ್ಯವೇದವು J.V. (BSI)

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:4
12 ತಿಳಿವುಗಳ ಹೋಲಿಕೆ  

ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].


ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ನಿಮ್ಮ ಊರಿಂದ ನಮ್ಮ ಕಾಲುಗಳಿಗೆ ಹತ್ತಿದ ಧೂಳನ್ನೂ ಒರಸಿಬಿಡುತ್ತೇವೆ; ಅದು ನಿಮಗೇ ಇರಲಿ; ಆದಾಗ್ಯೂ ದೇವರ ರಾಜ್ಯವು ಸಮೀಪಕ್ಕೆ ಬಂದದೆ ಎಂದು ನಿಮಗೆ ತಿಳಿದಿರಲಿ ಎಂಬದಾಗಿ ಹೇಳಿರಿ.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಎದ್ದು


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು