Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:6 - ಕನ್ನಡ ಸತ್ಯವೇದವು J.V. (BSI)

6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:6
14 ತಿಳಿವುಗಳ ಹೋಲಿಕೆ  

ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಆ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮೂರಿನ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಹೇಳುತ್ತೇನೆ.


ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.


ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು