Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:7 - ಕನ್ನಡ ಸತ್ಯವೇದವು J.V. (BSI)

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:7
15 ತಿಳಿವುಗಳ ಹೋಲಿಕೆ  

ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನನ್ನ ನಲ್ಲನು ಬಿಳುಪು ಕೆಂಪು ಬಣ್ಣವುಳ್ಳವನು; ಅವನು ಹತ್ತುಸಾವಿರ ಜನರಲ್ಲಿ ಧ್ವಜಪ್ರಾಯನು.


ಯೌವನಸ್ಥರಾದ ನಮ್ಮ ಗಂಡುಮಕ್ಕಳು ಹೊರವಾಗಿ ಬೆಳೆದಿರುವ ಸಸಿಗಳಂತಿರುವರು; ಹೆಣ್ಣುಮಕ್ಕಳು ಅರಮನೆಯಲ್ಲಿರುವ ವಿಚಿತ್ರವಾಗಿ ಕೆತ್ತಿದ ಮೂಲೆಗಂಬದಂತಿರುವರು.


ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ಅವರು ಹತ್ತು ದಿನಗಳ ಮೇಲೆ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ ಪುಷ್ಟರಾಗಿಯೂ ಕಾಣಿಸಿದರು.


ಮತ್ತು ಅವನು - ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡುವದಾದರೆ ನನ್ನ ಶಕ್ತಿಯು ಹೋಗುವದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು.


[ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು