ಪ್ರಲಾಪಗಳು 4:8 - ಕನ್ನಡ ಸತ್ಯವೇದವು J.V. (BSI)8 [ಈಗ] ಅವರ ಮುಖವು ಕಟ್ಟಕರಿದಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳ ಮೇಲೆ ಸುಕ್ಕಿಕೊಂಡಿದೆ, ಒಣಗಿ ಕಟ್ಟಿಗೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ. ಬೀದಿಗಳಲ್ಲಿ ಅವರು ಯಾರೆಂಬುದು ತಿಳಿಯಲಿಲ್ಲ. ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ. ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಅಧ್ಯಾಯವನ್ನು ನೋಡಿ |