Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:11 - ಕನ್ನಡ ಸತ್ಯವೇದವು J.V. (BSI)

11 ಹಿಂದಿನ ತಲಾಂತರಗಳ ಜ್ಞಾಪಕವು [ಈಗಿನವರಿಗೆ] ಇಲ್ಲ; ಮುಂದಿನ ತಲಾಂತರಗಳ ಜ್ಞಾಪಕವೂ ಅವುಗಳ ಮುಂದಿನ ತಲಾಂತರಗಳಿಗೆ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:11
7 ತಿಳಿವುಗಳ ಹೋಲಿಕೆ  

ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!


ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿಸಿದ ಅವರ ಕೋಟೆಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.


ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.


ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಇಗೋ, ಹೊಸದು ಎನಿಸಿಕೊಳ್ಳುವ ವಸ್ತುವಿದ್ದರೂ ಅದು ಪೂರ್ವದಲ್ಲಿ ನಮಗಿಂತ ಮುಂಚಿನ ಯುಗಗಳಲ್ಲಿಯೂ ಇದ್ದದ್ದೇ.


ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವದನ್ನು ಕಂಡೆನು, ಅವರು [ಸುಖವಾಗಿ] ಗತಿಸಿದರು; ಧಾರ್ಮಿಕರೋ ಪರಿಶುದ್ಧಸ್ಥಾನದಿಂದ ತೊಲಗಬೇಕಾಯಿತು, ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು; ಇದೂ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು