Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:13 - ಕನ್ನಡ ಸತ್ಯವೇದವು J.V. (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:13
22 ತಿಳಿವುಗಳ ಹೋಲಿಕೆ  

ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಪ್ರಯಾಸವನ್ನು ನೋಡಿದ್ದೇನೆ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.


ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು.


ಕಂದಾ, ಇವಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು; ಬಹುಗ್ರಂಥಗಳ ರಚನೆಗೆ ವಿುತಿಯಿಲ್ಲ; ಅತಿ ವ್ಯಾಸಂಗವು ದೇಹಕ್ಕೆ ಆಯಾಸ.


ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು.


ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.


ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.


ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಮನುಷ್ಯರು ಕತ್ತಲನ್ನು ಹೋಗಲಾಡಿಸಿ ಕಾರ್ಗತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ತನಕ ಹುಡುಕುವರು.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು