Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:15 - ಕನ್ನಡ ಸತ್ಯವೇದವು J.V. (BSI)

15 ವಕ್ರವಾದದ್ದನ್ನು ಸರಿಮಾಡುವದು ಅಸಾಧ್ಯ; ಇಲ್ಲದ್ದನ್ನು ಲೆಕ್ಕಿಸುವದು ಅಶಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೊಟ್ಟವಾದುದನ್ನು ನೆಟ್ಟಗೆ ಮಾಡುವುದು ಅಸಾಧ್ಯ, ಇಲ್ಲವಾದುದನ್ನು ಲೆಕ್ಕ ಹಾಕುವುದು ಅಶಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ವಕ್ರವಾದದ್ದನ್ನು ನೆಟ್ಟಗೆ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದಕ್ಕೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:15
10 ತಿಳಿವುಗಳ ಹೋಲಿಕೆ  

ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬೈಲುಸೀಮೆಯಾಗುವದು, ಕೊರಕಲ ನೆಲವು ಸಮವಾಗುವದು.


ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು