Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:16 - ಕನ್ನಡ ಸತ್ಯವೇದವು J.V. (BSI)

16 ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:16
20 ತಿಳಿವುಗಳ ಹೋಲಿಕೆ  

ಹೀಗೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು; ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು,


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!


ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತಾಡಿಕೊಳ್ಳುವೆನು ಅಂದುಕೊಂಡು ಮನಸ್ಸಿನಲ್ಲಿ ವಿಚಾರಿಸಿಕೊಂಡದ್ದೇನಂದರೆ -


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.


ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.


ಆಗ ನಾನು - ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುವದು; ನನ್ನ ಹೆಚ್ಚು ಜ್ಞಾನದಿಂದೇನು? ಇದೂ ವ್ಯರ್ಥವಲ್ಲವೆ ಅಂದುಕೊಂಡೆನು.


ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು