Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:6 - ಕನ್ನಡ ಸತ್ಯವೇದವು J.V. (BSI)

6 ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:6
11 ತಿಳಿವುಗಳ ಹೋಲಿಕೆ  

ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.


ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ.


ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.


ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ ಅದರಲ್ಲಿ ತೆರೆಗಳನ್ನು ಎಬ್ಬಿಸಿತು.


ಭೂವಿುಯು ತೆಂಕಣಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ ಉಡುಪಿನ ಬಿಸಿಯನ್ನು ಅನುಭವಿಸಿದವನೇ,


ಆತನ ಭಂಡಾರದಲ್ಲಿಂದ ಬಿರುಗಾಳಿಯೂ ಉತ್ತರದಿಕ್ಕಿನಿಂದ ಚಳಿಯೂ ಬರುವವು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.


ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುವವು; ಆದರೂ ಸಮುದ್ರವು ತುಂಬುವದಿಲ್ಲ; ಅವು ಎಲ್ಲಿಗೆ ಹರಿದು ಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು