Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:8 - ಕನ್ನಡ ಸತ್ಯವೇದವು J.V. (BSI)

8 ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:8
16 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ಮೃಷ್ಟಭೋಜನದಿಂದಲೋ ಎಂಬಂತೆ ನನ್ನ ಮನಸ್ಸು ಸಂತುಷ್ಟವಾಗಿರುವದು; ನನ್ನ ಬಾಯಿ ಉತ್ಸಾಹಧ್ವನಿಮಾಡುತ್ತಾ ನಿನ್ನನ್ನು ಕೊಂಡಾಡುವದು.


ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುವವು; ಆದರೂ ಸಮುದ್ರವು ತುಂಬುವದಿಲ್ಲ; ಅವು ಎಲ್ಲಿಗೆ ಹರಿದು ಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು