Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:10 - ಕನ್ನಡ ಸತ್ಯವೇದವು J.V. (BSI)

10 ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:10
20 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು.


ಎಲ್ಲೆಕಲ್ಲೆತ್ತುವವನಿಗೆ ಹಾನಿಯಾಗುವದು; ಮರವನ್ನು ಕಡಿಯುವವನಿಗೆ ಅಪಾಯವಿದೆ.


ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ?


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು