Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:15 - ಕನ್ನಡ ಸತ್ಯವೇದವು J.V. (BSI)

15 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:15
14 ತಿಳಿವುಗಳ ಹೋಲಿಕೆ  

ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.


ಜನವಿರುವ ಊರನ್ನು ಸೇರುವಂತೆ ಅವರನ್ನು ಸರಿಯಾದ ದಾರಿಯಲ್ಲಿ ನಡಿಸಿದನು.


ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ


ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.


ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.


ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು