Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:16 - ಕನ್ನಡ ಸತ್ಯವೇದವು J.V. (BSI)

16 ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:16
16 ತಿಳಿವುಗಳ ಹೋಲಿಕೆ  

ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ಯೆಹೋಯಾಕೀನನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು.


ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು