Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:18 - ಕನ್ನಡ ಸತ್ಯವೇದವು J.V. (BSI)

18 ಸೋಮಾರಿತನದಿಂದ ತೊಲೆಗಳು ಬೊಗ್ಗುವವು, ಜೋಲುಗೈಯಿಂದ ಮನೆ ಸೋರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:18
8 ತಿಳಿವುಗಳ ಹೋಲಿಕೆ  

ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ಕುಡುಕನೂ ಹೊಟ್ಟೆಬಾಕನೂ ದುರ್ಗತಿಗೆ ಬರುವರು; ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವದು.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.


ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು