Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:20 - ಕನ್ನಡ ಸತ್ಯವೇದವು J.V. (BSI)

20 ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:20
11 ತಿಳಿವುಗಳ ಹೋಲಿಕೆ  

ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು.


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.


ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.


ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯವಾಗಿ ಹುಟ್ಟುವವು; ಅವು ಹೊರಟುಬಂದು ನಿನ್ನ ಅರಮನೆಯಲ್ಲಿಯೂ ಮಲಗುವ ಕೋಣೆಯಲ್ಲಿಯೂ ಮಂಚದ ಮೇಲೆಯೂ ಬರುವದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ ನಿನ್ನ ಪ್ರಜೆಗಳ ಮೇಲೆಯೂ ಒಲೆಗಳಲ್ಲಿಯೂ ಹಿಟ್ಟುನಾದುವ ಕೊಣವಿಗೆಗಳಲ್ಲಿಯೂ ಬರುವವು;


ಅವನಿಗೆ ಬೇರೆ ಯಾವ ಹೊದಿಕೆಯಿಲ್ಲವಲ್ಲಾ; ಅದನ್ನೇ ಮೈಗೆ ಕಟ್ಟಿಕೊಳ್ಳಬೇಕು; ಬೇರೆ ಯಾವದನ್ನು ಸುತ್ತಿಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕೇಳುವೆನು; ನಾನು ದಯಾಪರನೇ.


ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್‍ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು