Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:5 - ಕನ್ನಡ ಸತ್ಯವೇದವು J.V. (BSI)

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:5
10 ತಿಳಿವುಗಳ ಹೋಲಿಕೆ  

ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರವಸ್ಥೆಯನ್ನು ಕಂಡೆನು;


ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು.


ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು